Please enable javascript.Belagavi,Umesh Katti | ಬೆಳಗಾವಿಗೆ ಪಾರ್ಥಿವ ಶರೀರ ಏರ್‌ಲಿಫ್ಟ್‌: ಬೆಲ್ಲದ ಬಾಗೇವಾಡಿಯಲ್ಲಿ ಉಮೇಶ್‌ ಕತ್ತಿ ಅಂತಿಮ ಸಂಸ್ಕಾರ - karnataka bjp minister umesh katti hukkeri mla airlift to belagavi from bengaluru hal last rites in bellad bagewadi farm - Vijay Karnataka

Umesh Katti | ಬೆಳಗಾವಿಗೆ ಪಾರ್ಥಿವ ಶರೀರ ಏರ್‌ಲಿಫ್ಟ್‌: ಬೆಲ್ಲದ ಬಾಗೇವಾಡಿಯಲ್ಲಿ ಉಮೇಶ್‌ ಕತ್ತಿ ಅಂತಿಮ ಸಂಸ್ಕಾರ

Edited byಹೇಮಂತ್ ಕುಮಾರ್ ಎಸ್ | Vijaya Karnataka Web 7 Sep 2022, 11:04 am
Subscribe

Umesh Katti airlift to Belagavi: ಬೆಳಗಾವಿ ಜಿಲ್ಲೆಯಾದ್ಯಂತ ಬುಧವಾರ ಶಾಲೆ, ಕಾಲೇಜುಗಳು ಹಾಗೂ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಬುಧವಾರ ಬೆಳಿಗ್ಗೆ 7 ಗಂಟೆಗೆ ಪಾರ್ಥಿವ ಶರೀರವನ್ನು ಎಚ್‌ಎಎಲ್‌ನಿಂದ (HAL) ಬೆಳಗಾವಿಗೆ ಏರ್‌ಲಿಫ್ಟ್‌ (Airlift)ಮಾಡಲು ನಿರ್ಧರಿಸಲಾಗಿದೆ. ಸಂಜೆ 5 ಗಂಟೆಯವರೆಗೂ ಬೆಲ್ಲದ ಬಾಗೇವಾಡಿಯಲ್ಲಿ (bellad bagewadi) ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಬುಧವಾರ ಬೆಳಿಗ್ಗೆಯೇ ಎಂ.ಎಸ್‌.ರಾಮಯ್ಯ ಆಸ್ಪತ್ರೆಯ (MS Ramaiah hospital) ಬಳಿಯೇ ಸಕಲ ಸರಕಾರಿ ಗೌರವಗಳನ್ನು ನೀಡಲು ನಿರ್ಧರಿಸಲಾಗಿದೆ.

ಹೈಲೈಟ್ಸ್‌:

  • ಬುಧವಾರ ಬೆಳಿಗ್ಗೆ 7 ಗಂಟೆಗೆ ಪಾರ್ಥಿವ ಶರೀರವನ್ನು ಎಚ್‌ಎಎಲ್‌ನಿಂದ ಬೆಳಗಾವಿಗೆ ಏರ್‌ಲಿಫ್ಟ್‌ ಮಾಡಲು ನಿರ್ಧಾರ
  • ಮಂಗಳವಾರ ರಾತ್ರಿ ಬೆಂಗಳೂರಿನ ಡಾಲರ್ಸ್‌ ಕಾಲೊನಿಯಲ್ಲಿರುವ ನಿವಾಸದಲ್ಲಿ ಹೃದಯಾಘಾತ
  • ತುರ್ತು ನಿಗಾ ಘಟಕದಲ್ಲಿ ಹೃದಯಕ್ಕೆ ಕೃತಕವಾಗಿ ಪಂಪ್‌ ಮಾಡುವ (ಸಿಪಿಆರ್‌) ಪ್ರಯತ್ನ ಮಾಡಲಾಯಿತು
  • ಸಚಿವರು, ಮುಖಂಡರು ಬೆಳಗಾವಿಗೆ ಪ್ರಯಾಣಿಸಲು ವಿಶೇಷ ವಿಮಾನದ ವ್ಯವಸ್ಥೆ
Umesh katti minister
ಸಚಿವ ಉಮೇಶ್‌ ಕತ್ತಿ
ಬೆಂಗಳೂರು: ಉಮೇಶ ಕತ್ತಿ (Umesh Katti) ಅವರ ತಂದೆ ವಿಶ್ವನಾಥ ಕತ್ತಿ 1985ರಲ್ಲಿ ಶಾಸಕರಾಗಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಈಗ ಪುತ್ರ ಉಮೇಶ ಕತ್ತಿ ಕೂಡ ಹೃದಯಾಘಾತದಿಂದ ಅಸುನೀಗಿದ್ದಾರೆ. ಬುಧವಾರ ಸಂಜೆ ಅವರ ಸ್ವಗ್ರಾಮ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಬುಧವಾರ ಶಾಲೆ, ಕಾಲೇಜುಗಳು ಹಾಗೂ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಬುಧವಾರ ಬೆಳಿಗ್ಗೆ 7 ಗಂಟೆಗೆ ಪಾರ್ಥಿವ ಶರೀರವನ್ನು ಎಚ್‌ಎಎಲ್‌ನಿಂದ ಬೆಳಗಾವಿಗೆ ಏರ್‌ಲಿಫ್ಟ್‌ ಮಾಡಲು ನಿರ್ಧರಿಸಲಾಗಿದೆ. ಸಂಜೆ 5 ಗಂಟೆಯವರೆಗೂ ಬೆಲ್ಲದ ಬಾಗೇವಾಡಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಬುಧವಾರ ಬೆಳಿಗ್ಗೆಯೇ ಎಂ.ಎಸ್‌.ರಾಮಯ್ಯ ಆಸ್ಪತ್ರೆಯ ಬಳಿಯೇ ಸಕಲ ಸರಕಾರಿ ಗೌರವಗಳನ್ನು ನೀಡಲು ನಿರ್ಧರಿಸಲಾಗಿದೆ.
Umesh katti | ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ
ಮಂಗಳವಾರ ರಾತ್ರಿ ಬೆಂಗಳೂರಿನ ಡಾಲರ್ಸ್‌ ಕಾಲೊನಿಯಲ್ಲಿರುವ ನಿವಾಸದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದ ಉಮೇಶ್ ಕತ್ತಿ ಅವರನ್ನು ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಅವರನ್ನು ಉಳಿಸಿಕೊಳ್ಳಲು ವೈದ್ಯರು ಅರ್ಧ ತಾಸು ಪ್ರಯತ್ನ ನಡೆಸಿದ್ದರು. ಆದರೆ, ಆಸ್ಪತ್ರೆಗೆ ಬರುವುದಕ್ಕೂ ಮುನ್ನವೇ ಅವರ ಹೃದಯ ಬಡಿತ ನಿಂತಿತ್ತು ಎಂದು ವೈದ್ಯರು ತಿಳಿಸಿದರು.

'ಹೃದಯಾಘಾತವಾಗಿ ಸುಮಾರು ಹದಿನೈದು ನಿಮಿಷಗಳ ನಂತರ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಹೃದಯಕ್ಕೆ ಕೃತಕವಾಗಿ ಪಂಪ್‌ ಮಾಡುವ (ಸಿಪಿಆರ್‌) ಪ್ರಯತ್ನ ಮಾಡಲಾಯಿತು. ಆದರೆ, ಅವರ ಹೃದಯ ಬಡಿತ ಮರಳಲಿಲ್ಲ. ರಾತ್ರಿ 11:30ರ ಸುಮಾರು ನಿಧನರಾಗಿರುವುದನ್ನು ಅಧಿಕೃತವಾಗಿ ಘೋಷಿಸಲಾಯಿತು. ಮನೆಯಲ್ಲೇ ಸಿಪಿಆರ್‌ ಮಾಡಿದ್ದರೆ, ಜೀವ ಉಳಿಯುವ ಸಾಧ್ಯತೆ ಇತ್ತು' ಎಂದು ಎಂ.ಎಸ್‌.ರಾಮಯ್ಯ ಆಸ್ಪತ್ರೆಯ ವೈದ್ಯ ಡಾ.ರಮೇಶ್‌ ತಿಳಿಸಿದರು.
Umesh Katti: 25ನೇ ವಯಸ್ಸಿನಲ್ಲೇ ವಿಧಾನಸಭೆ ಪ್ರವೇಶಿಸಿದ್ದ ಉಮೇಶ್ ಕತ್ತಿ
ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಆದಾಗ ಅವರ ಮಗಳು ಮತ್ತು ಅಳಿಯ ಬೆಂಗಳೂರಿನಲ್ಲಿಯೇ ಇದ್ದರು. ವಿಷಯ ತಿಳಿದ ನಂತರ ಅವರ ಪತ್ನಿ ಮತ್ತು ಸೋದರ (ರಮೇಶ್ ಕತ್ತಿ) ತಡರಾತ್ರಿ ಬೆಂಗಳೂರಿಗೆ ಪ್ರಯಾಣಿಸಿದರು.

ಉಮೇಶ್‌ ಕತ್ತಿ ಅವರ ಕುರಿತು ಮಾತನಾಡುತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವುಕರಾದರು. ಅಂತಿಮ ದರ್ಶನದ ವ್ಯವಸ್ಥೆಯ ಕುರಿತು ಇದೇ ವೇಳೆ ಮಾಹಿತಿ ನೀಡಿದರು.
Umesh Katti Death: ಆಹಾರ ಖಾತೆ ಸಚಿವ ಹುಕ್ಕೇರಿಯ ಉಮೇಶ್‌ ಕತ್ತಿ ನಿಧನಕ್ಕೆ ಗಣ್ಯರ ಸಂತಾಪ
'ನಾಳೆ ಬೆಳಿಗ್ಗೆ ಏಳು ಗಂಟೆಗೆ ಏರ್‌ ಆಂಬುಲೆನ್ಸ್‌ ಮೂಲಕ ಬೆಳಗಾವಿಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತದೆ. ಅಲ್ಲಿಂದ ನೇರವಾಗಿ ಸಂಕೇಶ್ವದ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ ಎರಡರವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶವಿರುತ್ತದೆ. ಅಲ್ಲಿಂದ ಅವರ ನಿವಾಸಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲಾಗುತ್ತದೆ. ಅಲ್ಲಿ ವಿಧಿವಿಧಾನ ನಡೆಸಲಾಗುತ್ತದೆ ಹಾಗೂ ಅನಂತರ ಸ್ವಂತ ತೋಟಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಸಂಜೆ ಐದು ಗಂಟೆಗೆ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ. ಸಕಲ ಸರಕಾರಿ ಗೌರವಗಳನ್ನು ನೀಡಲಾಗುತ್ತದೆ. ಹೆಚ್ಚಿನ ಜನರು ಬರುವುದರಿಂದ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ' ಎಂದರು.
Umesh Katti: ಹೃದಯಾಘಾತದಿಂದ ನಿಧನಗೊಂಡ ಹುಕ್ಕೇರಿಯ ಉಮೇಶ್ ಕತ್ತಿ ನಡೆದು ಬಂದ ರಾಜಕೀಯ ಹಾದಿ
'ಬೆಳಿಗ್ಗೆಯೇ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನ ಇದ್ದು, ಉಮೇಶ್ ಕತ್ತಿ ಅವರ ಮನೆಯವರು ಹಾಗೂ ಆಪ್ತರು ಪ್ರಯಾಣ ಬೆಳಸಲಿದ್ದಾರೆ. ಸಂಪುಟ ಸಹೋದ್ಯೋಗಿಗಳು, ಮುಖಂಡರು ಬೆಂಗಳೂರಿನಿಂದ ತೆರಳು ಬೆಳಿಗ್ಗೆ 11ರ ಸುಮಾರಿಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ' ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.
ಹೇಮಂತ್ ಕುಮಾರ್ ಎಸ್
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ